ADVERTISEMENT

ಮಾಗಡಿ | ಪುರಸಭೆ ಸ್ಥಾಯಿ ಸಮಿತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 5:51 IST
Last Updated 9 ಅಕ್ಟೋಬರ್ 2024, 5:51 IST
ಮಾಗಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಚ್.ಆರ್. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದು ಶಾಸಕ ಎಚ್.ಸಿ. ಬಾಲಕೃಷ್ಣ ಅಭಿನಂದನೆ ಸಲ್ಲಿಸಿದರು
ಮಾಗಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಚ್.ಆರ್. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದು ಶಾಸಕ ಎಚ್.ಸಿ. ಬಾಲಕೃಷ್ಣ ಅಭಿನಂದನೆ ಸಲ್ಲಿಸಿದರು   

ಮಾಗಡಿ: ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪುರಸಭೆ ಸದಸ್ಯರಾದ ಎಚ್.ಆರ್.ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಶಿವಕುಮಾರ್ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಹೇಮಲತಾ ನಾಗರಾಜ್, ಆಶಾರಾಣಿ ವೆಂಕಟರಾಮ್, ರಹಮತ್, ಎಂ.ಎನ್.ಮಂಜುನಾಥ್, ನಾಗರತ್ನಮ್ಮ, ಅಶ್ವಥ್, ಅನಿಲ್ ಕುಮಾರ್ aವರನ್ನು ಆಯ್ಕೆ ಮಾಡಲಾಯಿತು. ಪುರಸಭಾ ಅಧ್ಯಕ್ಷೆ  ರಮ್ಯಾ ನರಸಿಂಹಮೂರ್ತಿ, ಉಪಾಧ್ಯಕ್ಷ ರಿಯಾಜ್ ಪುರಸಭೆ, ಮುಖ್ಯಾಧಿಕಾರಿ ಶಿವರುದ್ರಯ್ಯ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT