ADVERTISEMENT

ಹೊಲಿಗೆ ಯಂತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 13:40 IST
Last Updated 3 ಜೂನ್ 2020, 13:40 IST
ಚೀಲೂರು ಗ್ರಾಮ ಪಂಚಾಯಿತಿ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು
ಚೀಲೂರು ಗ್ರಾಮ ಪಂಚಾಯಿತಿ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು   

ಕನಕಪುರ: ತಾಲ್ಲೂಕಿನ ಮರಳವಾಡಿ ಹೋಬಳಿ ಚೀಲೂರು ಗ್ರಾಮ ಪಂಚಾಯಿತಿವತಿಯಿಂದ 57 ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು ಬುಧವಾರ ವಿತರಣೆ ಮಾಡಲಾಯಿತು.

ಪಂಚಾಯಿತಿಯ 14ನೇ ಹಣಕಾಸಿನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅನುದಾನದಲ್ಲಿ ಹೊಲಿಗೆ ಯಂತ್ರವನ್ನು ಖರೀದಿ ಮಾಡಲಾಗಿತ್ತು. ಕೋವಿಡ್‌-19 ಸಮಸ್ಯೆಯಿಂದ ವಿತರಣೆ ಮಾಡಲಾಗಿರಲಿಲ್ಲ.

ಪಂಚಾಯಿತಿ ಅಧ್ಯಕ್ಷೆ ಶೋಭಾ ಸಿದ್ದಪ್ಪ ಅವರು ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಣೆ ಮಾಡಿದ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಪ್ರಗತಿಯಾಗಲು ಸ್ವಂತ ಉದ್ಯಮವನ್ನು ಮಾಡಬೇಕು.ಅದಕ್ಕಾಗಿ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ದಯಾನಂದ ಸಾಗರ್‌, ಕಾರ್ಯದರ್ಶಿ ಶಿಲ್ಪಾ, ಸದಸ್ಯರಾದ ಲೋಕೇಶ್‌, ಕುರುಬಳ್ಳಿ ತಿಮ್ಮಪ್ಪ, ಹುಲಿಸಿದ್ದೇಗೌಡನದೊಡ್ಡಿ ಸಿದ್ದಪ್ಪ, ಜಕ್ಕಸಂದ್ರ ಕೇಬಲ್‌ ರವಿ, ಚೋಳೂರಯ್ಯ, ಪಂಚಾಯಿತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.