ADVERTISEMENT

ಕುದೂರು: ಕಲೋತ್ಸವದಲ್ಲಿ ಮಿಂಚಿದ ಚಿಣ್ಣರು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 8:58 IST
Last Updated 20 ಸೆಪ್ಟೆಂಬರ್ 2024, 8:58 IST
ಕುದೂರು ಹೋಬಳಿ ಮಾದಿಗೊಂಡನಹಳ್ಳಿಯಲ್ಲಿ ಬುಧವಾರ ನಡೆದ ಹೋಬಳಿ ಮಟ್ಟದ ಪ್ರೌಢಶಾಲೆ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಕುದೂರು ಹೋಬಳಿ ಮಾದಿಗೊಂಡನಹಳ್ಳಿಯಲ್ಲಿ ಬುಧವಾರ ನಡೆದ ಹೋಬಳಿ ಮಟ್ಟದ ಪ್ರೌಢಶಾಲೆ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.   

ಕುದೂರು: ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳಲ್ಲಿ ಭಾರತೀಯ ಕಲೆ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ತಿಳಿಸಿದರು.

ಮಾದಿಗೊಂಡನಹಳ್ಳಿಯ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಬುಧವಾರ ನಡೆದ ಹೋಬಳಿ ಮಟ್ಟದ ಪ್ರೌಢಶಾಲೆ ವಿಭಾಗದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.

ಇಸಿಒ ಗಂಗಾಧರ್ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಲ್ಲಿಯೂ ಒಂದೊಂದು ಕಲೆ ಅಡಗಿರುತ್ತದೆ. ಅವಕಾಶ ಸಿಕ್ಕಾಗ ಅದನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಹೇಳಿದರು.

ADVERTISEMENT

ಹೋಬಳಿಯ 18 ಪ್ರೌಢಶಾಲೆಗಳ ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳು ರಾಷ್ಟ್ರನಾಯಕರು, ಪೌರಾಣಿಕ, ಐತಿಹಾಸಿಕ ಪಾತ್ರಗಳ ವೇಷಭೂಷಣ ತೊಟ್ಟು ಮಿಂಚಿದರು. ಜಾನಪದ ಗೀತೆ ಗಾಯನ ನೆರವೇರಿತು. ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ದಯಾನಂದ್, ಶಿಕ್ಷಕರಾದ ರೇಣುಕೇಶ್, ಶ್ರೀಗಿರಿಪುರ ಮಂಜುನಾಥ್, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಿಆರ್‌ಪಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.