ADVERTISEMENT

ಸಾಧಕರಿಗೆ ಸನ್ಮಾನದಿಂದ ಉತ್ತೇಜನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2020, 13:10 IST
Last Updated 22 ಫೆಬ್ರುವರಿ 2020, 13:10 IST
ಶಿವಗಿರಿ ಕ್ಷೇತ್ರದಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಸನ್ಮಾನಗೊಂಡ ಸಾಧಕರು
ಶಿವಗಿರಿ ಕ್ಷೇತ್ರದಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಸನ್ಮಾನಗೊಂಡ ಸಾಧಕರು   

ಉಯ್ಯಂಬಳ್ಳಿ (ಕನಕಪುರ): ಇಲ್ಲಿನ ಉಯ್ಯಂಬಳ್ಳಿ ಹೋಬಳಿ ಶಿವಗಿರಿ ಕ್ಷೇತ್ರ ಶಿವಾಲ್ದಪ್ಪನ ಬೆಟ್ಟದಲ್ಲಿ ನಡೆದ ಶಿವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಶುಕ್ರವಾರ ಸಂಜೆ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸಾತನೂರು ಹೋಬಳಿ ಕೆ.ಪಾಳ್ಯ ಸಾತನೂರು ಗ್ರಾಮಾಂತರ ಪ್ರೌಢಶಾಲೆ ಮುಖ್ಯ ಶಿಕ್ಷಕ ವಿ.ರಾಜು, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹಾರೋಹಳ್ಳಿ ಹೋಬಳಿ ಗಬ್ಬಾಡಿ ಗ್ರಾಮದ ಜಿ.ಪಿ. ಕಾಡೇಗೌಡ, ಕ್ರೀಡಾ ಕ್ಷೇತ್ರದಲ್ಲಿ ಸಾತನೂರು ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎ. ತಿಪ್ಪೇಸ್ವಾಮಿ ಮತ್ತು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಚಿನ್ನದ ಪದಕ ಗಳಿಸಿದ ಯುವ ಕ್ರೀಡಾಪಟು ದೊಡ್ಡಾಲಹಳ್ಳಿ ಗೋವರ್ಧನ ಅವರನ್ನು ಗೌರವಿಸಲಾಯಿತು.

ಶಿವಗಿರಿ ಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಬಿ.ಡಿ.ದಿನೇಶ್‌ ಮಾತನಾಡಿ, ಸಾಧಕರನ್ನು ಗುರುತಿಸಿ ಸನ್ಮಾನಿಸಿದಾಗ ಅವರನ್ನು ಉತ್ತೇಜಿಸಿದಂತಾಗುತ್ತದೆ. ಸಾಧಕರು ಬೇರೆಯವರಿಗೆ ಸ್ಫೂರ್ತಿಯಾಗುತ್ತಾರೆ. ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಶ್ರೀ ಕ್ಷೇತ್ರವು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.

ADVERTISEMENT

ಸೇವಾ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ್‌, ನಿರ್ದೇಶಕ ಎಸ್‌.ನಾಗರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.