ಹಾರೋಹಳ್ಳಿ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಶನಿವಾರ ಶಾರ್ಟ್ ಸರ್ಕೀಟ್‌ನಿಂದಾಗಿ ಮೂರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಸ್ಥಳಕ್ಕೆ ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಸಿಬ್ಬಂದಿ ಸ್ಥಳಕ್ಕೆ ತಡವಾಗಿ ಬಂದಿದ್ದರ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.