
ಚನ್ನಪಟ್ಟಣ: ತಾಲ್ಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ಸುಮಾರು ₹60 ಲಕ್ಷ ವೆಚ್ಚದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಬಮೂಲ್ ನಿರ್ದೇಶಕ ಎಸ್. ಲಿಂಗೇಶ್ ಕುಮಾರ್ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಲು ತಾಲ್ಲೂಕಿನ ಸಿಂಗರಾಜಿಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸುಮಾರು 10 ಸಾವಿರ ಲೀಟರ್ ಹಾಲಿನ ಸಾಮರ್ಥ್ಯದ ಬಿಎಂಸಿ ಹಾಗೂ ₹60 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮುಂದಿನ 6 ತಿಂಗಳಿನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಸಂಘದ ಕಟ್ಟಡ ನಿರ್ಮಾಣಕ್ಕೆ ಕೆಎಂಎಫ್ ನಿಂದ ₹10 ಲಕ್ಷ ವಿಶೇಷ ಅನುದಾನ, ಬಮೂಲ್‌ನಿಂದ ₹4.5 ಲಕ್ಷ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ₹2 ಲಕ್ಷ ಹಾಗೂ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹5 ಲಕ್ಷ, ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ₹5 ಲಕ್ಷ ಅನುದಾನ ದೊರೆತಿದೆ ಎಂದರು.
ಚನ್ನಪಟ್ಟಣ ಬಮೂಲ್ ಶಿಬಿರ ಕಚೇರಿಯ ಡಾ. ಸಿ.ಆರ್.ಕಿರಣ್, ಹೊನ್ನಪ್ಪ ಪೂಜಾರಿ, ಎಸ್.ಪಿ. ಪ್ರಸನ್ನಕುಮಾರ್, ಎಸ್.ಎ. ಶಿವಕುಮಾರ್, ಬಿ.ಎಸ್. ಗೀತಾ, ಎಸ್.ಸಿ.ರವಿಶಂಕರ್, ಚಾಮರಾಜು, ನಾಗರಾಜು, ಸಿದ್ದೇಗೌಡ, ಕೆ.ಶಿವಣ್ಣ, ಶಶಿಕಲಾ, ಮಂಗಳ ರವಿಕುಮಾರ್, ರಾಜೇಶ್, ಸಿದ್ದೇಗೌಡ, ಶಿವಕುಮಾರ್, ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.