ADVERTISEMENT

ಶಿವನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ರಾಜೇಶ್ವರಿ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 8:11 IST
Last Updated 9 ನವೆಂಬರ್ 2021, 8:11 IST
ಶಿವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾದ ಎಸ್‌.ಎನ್‌. ರಾಜೇಶ್ವರಿ ಮತ್ತು ಪಂಚಾಯಿತಿ ಸದಸ್ಯರು ಮತ್ತು ಮುಖಂಡರು
ಶಿವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾದ ಎಸ್‌.ಎನ್‌. ರಾಜೇಶ್ವರಿ ಮತ್ತು ಪಂಚಾಯಿತಿ ಸದಸ್ಯರು ಮತ್ತು ಮುಖಂಡರು   

ಕನಕಪುರ: ತಾಲ್ಲೂಕಿನ ಶಿವನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಎಸ್‌.ಎನ್‌. ರಾಜೇಶ್ವರಿ ವೀರಪ್ಪ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅವಧಿಯ ಅಧ್ಯಕ್ಷೆಯಾಗಿದ್ದ ಶಿವಮ್ಮ ನಾಗರಾಜ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು, ಪಿಆರ್‌ಡಿ ಇಲಾಖೆಯ ಛತ್ರಪತಿ ಸೋಮವಾರ ಚುನಾವಣೆ ನಡೆಸಿದರು.

ರಾಜೇಶ್ವರಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಡಿ. ವಿನುತಾ ಚುನಾವಣಾ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು. ಪಂಚಾಯಿತಿ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್‌ ಮುಖಂಡರು ಸೇರಿದಂತೆ ಶಿವನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಅಧ್ಯಕ್ಷರನ್ನು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.