ADVERTISEMENT

ರಾಮನಗರ: 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 2:16 IST
Last Updated 20 ನವೆಂಬರ್ 2025, 2:16 IST
ಮಾಗಡಿ ತಾಲ್ಲೂಕಿನ ಮಾಡಬಾಳ್ ಗ್ರಾಮದ ಹೊನ್ನಪ್ಪ ಅವರ ರಾಗಿ ಹೊಲದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಸ್ನೇಕ್ ರಾಯ ರಕ್ಷಿಸಿದರು
ಮಾಗಡಿ ತಾಲ್ಲೂಕಿನ ಮಾಡಬಾಳ್ ಗ್ರಾಮದ ಹೊನ್ನಪ್ಪ ಅವರ ರಾಗಿ ಹೊಲದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಸ್ನೇಕ್ ರಾಯ ರಕ್ಷಿಸಿದರು   

ಮಾಗಡಿ: ತಾಲ್ಲೂಕಿನ ಮಾಡಬಾಳ್ ಗ್ರಾಮದಲ್ಲಿ ಹೊನ್ನಪ್ಪ ಅವರ ರಾಗಿ ಹೊಲದಲ್ಲಿ ಕಾಣಿಸಿಕೊಂಡಿದ್ದ 10 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕ ಸ್ನೇಕ್ ರಾಯ ರಕ್ಷಿಸಿ ತಾಲ್ಲೂಕಿನ ಸಾವನದುರ್ಗ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ರಾಗಿ ಹೊಲ ಕಟಾವಿನ ಸಮಯದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿತ್ತು. ಆಗ ಸ್ಥಳೀಯರು ಸ್ನೇಕ್ ರಾಯ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಅವರು ಹೆಬ್ಬಾವನ್ನು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ರೈತರು ಹೊಲದಲ್ಲಿ ಕಾರ್ಯ ನಿರ್ವಹಿಸುವಾಗ ವಿಷ ಜಂತುಗಳಿರುತ್ತವೆ ಹಾಗಾಗಿ ರಕ್ಷಣಾ ಕವಚ ಧರಸಿ ಕೆಲಸ ಮಾಡಿ.
– ವಿಜಯ ಸವಣೂರು, ಕೃಷಿ ಇಲಾಖೆ ಸಹಾಯಕಿ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT