ಮಾಗಡಿ: ಸೋಲೂರು ಹೋಬಳಿಯನ್ನು ಮಾಗಡಿ ತಾಲ್ಲೂಕಿನಲ್ಲೇ ಉಳಿಸಲು 20,000ಕ್ಕೂ ಹೆಚ್ಚು ಸಹಿ ಸಂಗ್ರಹಿಸಿ ಜನರು ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಲು ಮುಂದಾಗಿದ್ದಾರೆ. ಹೋಬಳಿಯನ್ನು ನೆಲಮಂಗಲಕ್ಕೆ ಸೇರಿಸಿದರೆ ಉಂಟಾಗುವ ತೊಂದರೆ ವಿವರಿಸಿದ ಸಹಿ ಪತ್ರಗಳನ್ನು ಕಂದಾಯ ಇಲಾಖೆಗೆ ತಲುಪಿಸಲಾಗುತ್ತಿದೆ. ಸರ್ಕಾರದ ನೋಟಿಫಿಕೇಷನ್‌ಗೆ ಆಕ್ಷೇಪಣೆ ಸಲ್ಲಿಸಲು ನಿಗದಿತ ಸಮಯ ಮುಗಿಯುತ್ತಿರುವುದರಿಂದ ಜನರು ಸಾಮೂಹಿಕ ಪತ್ರದ ಮೂಲಕ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಕ್ಷೇಪ ಪತ್ರದಲ್ಲಿ ಹೆಸರು, ಆಧಾರ್, ಮೊಬೈಲ್ ಸಂಖ್ಯೆ ಮತ್ತು ಸಹಿ ಇರುವುದರಿಂದ ಅದು ಹೆಚ್ಚು ಬಲವಾಗಲಿದೆ ಎಂದು ನರಸಿಂಹಮೂರ್ತಿ ಮತ್ತು ಚಂದ್ರಶೇಖರ್ ತಿಳಿಸಿದ್ದಾರೆ.
ಶಾಸಕ ಬಾಲಕೃಷ್ಣ ಜನರು ಮುಂದೆ ಬಂದರೆ ಹೋಬಳಿಯನ್ನು ಉಳಿಸುವುದಾಗಿ ಭರವಸೆ ನೀಡಿದ್ದರು. ಈಗ ಶಾಸಕರು ಯಾವ ಕ್ರಮಕೈಗೊಳ್ಳುತ್ತಾರೆ ಎಂಬುದು ಗಮನಾರ್ಹವಾಗಿದೆ ಎನ್ನುತ್ತಾರೆ ನರಸಿಂಹಮೂರ್ತಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.