
ಪ್ರಜಾವಾಣಿ ವಾರ್ತೆಮಾಗಡಿಯ ಐತಿಹಾಸಿಕ ಪ್ರಸನ್ನ ಸೋಮೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ಕೆಂಪೇಗೌಡರು ತಮ್ಮ ತಾಯಿಗಾಗಿ ಕಟ್ಟಿಸಿರುವ ಐತಿಹಾಸಿಕ ಪ್ರಸನ್ನ ಸೋಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಮಧ್ಯಾಹ್ನ ರಥೋತ್ಸವ ನಡೆಯಲಿದೆ.
ರಥಸಪ್ತಮಿ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸೋಮೇಶ್ವರ ರಥೋತ್ಸವ ನಡೆಯಲಿದ್ದು ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ.
ಜ.26 ರಂದು ಅಶ್ವ ವಾಹನೋತ್ಸವ, ಮಂಗಳವಾರ ಅವಭೃತ ಸ್ನಾನ, ಪ್ರಭಾವಳಿ ಉತ್ಸವ, ಪ್ರಖಾರೋತ್ಸವ, ತೆಪ್ಪೋತ್ಸವ ನಡೆಯಲಿದೆ.
ಬುಧವಾರ ಸಂಜೆ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದ್ದು 10 ದಿನ ದೇವಾಲಯದಲ್ಲಿ ವಿವಿಧ ಕಾರ್ಯಗಳುನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನದ ಅರ್ಚಕ ಕಿರಣ್ ದೀಕ್ಷಿತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.