ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:10 IST
Last Updated 21 ಸೆಪ್ಟೆಂಬರ್ 2020, 16:10 IST
ರಾಮನಗರದ ಪರೀಕ್ಷಾ ಕೇಂದ್ರದಲ್ಲಿ ಬಿಇಒ ಮರೀಗೌಡ ವಿದ್ಯಾರ್ಥಿಗಳ ದೇಹದ ಉಷ್ಣತೆ ತಪಾಸಣೆ ಮಾಡಿದರು
ರಾಮನಗರದ ಪರೀಕ್ಷಾ ಕೇಂದ್ರದಲ್ಲಿ ಬಿಇಒ ಮರೀಗೌಡ ವಿದ್ಯಾರ್ಥಿಗಳ ದೇಹದ ಉಷ್ಣತೆ ತಪಾಸಣೆ ಮಾಡಿದರು   

ರಾಮನಗರ: ಜಿಲ್ಲೆಯಾದ್ಯಂತ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಆರಂಭಗೊಂಡಿತು.

ಮೊದಲ ದಿನದಂದು ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಗಣಿತ ಪರೀಕ್ಷೆ ನಡೆಯಿತು. ಒಟ್ಟು 909 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು ಇದರಲ್ಲಿ 822 ಮಂದಿ ಹಾಜರಾಗಿದ್ದು, 87 ಮಂದಿ ಗೈರಾದರು. 273 ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಜುಲೈ ವೇಳೆ ಕೋವಿಡ್ ಹಿನ್ನಲೆಯಲ್ಲಿ ಅನಾರೋಗ್ಯ ನಿಮಿತ್ತ ಪರೀಕ್ಷೆಗೆ ಗೈರು ಹಾಜರಾಗಿ ಸೆಪ್ಟೆಂಬರ್‌ನಲ್ಲಿ ಪೂರಕ ಪರೀಕ್ಷೆಗೆ ಪ್ರಥಮ ಯತ್ನ ಎಂದು ಪರಿಗಣಿಸಿ ಪರೀಕ್ಷೆಗೆ 24 ಮಂದಿ ಹಾಜರಾಗಿದ್ದಾರೆ.

ಜಿಲ್ಲೆಯಲ್ಲಿ ಪೂರಕ ಪರೀಕ್ಷೆಗಾಗಿ ಈ ಬಾರಿ ಒಟ್ಟಾರೆ 1877 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇದರಲ್ಲಿ 1203 ಬಾಲಕರು ಹಾಗೂ ಹಾಗೂ 674 ಬಾಲಕಿಯರು ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಯ್ಯ, ರಾಮನಗರ ಬಿಇಒ ಮರೀಗೌಡ ಮತ್ತಿತರರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.