ಹಾರೋಹಳ್ಳಿ: ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಹಾರೋಹಳ್ಳಿ ಪಟ್ಟಣದ ಜನತಾ ಕಾಲೊನಿ ನಿವಾಸಿ ವಾರೀಶ್ ಎಂಬುವರ ಮಗಳು ಆಯುಷ ಭಾನು (5) ಗುರುವಾರ ಸಂಜೆ 7.30ಕ್ಕೆ ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಮೈಮೇಲೆ ಎರಗಿದ ನಾಯಿ ಬೆನ್ನಿನ ಭಾಗಕ್ಕೆ ಬಲವಾಗಿ ಕಚ್ಚಿ, ಬೆನ್ನಟ್ಟಿಸಿಕೊಂಡು ಹೋಗಿದೆ. ತಕ್ಷಣವೇ ಅಕ್ಕಪಕ್ಕದ ಜನರು ಬಂದು ನಾಯಿಯನ್ನು ಓಡಿಸಿ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಹಾಗಾಗಿ ಪಟ್ಟಣ ಪಂಚಾಯಿತಿಯವರು ಬೀದಿನಾಯಿ ಉಪಟಳ ನಿಯಂತ್ರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.