ADVERTISEMENT

ರಾಮನಗರ: ಬೀದಿನಾಯಿಗಳ ಸಂಖ್ಯೆ ಲೆಕ್ಕ ಮಾಡಿ ತಿಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2025, 6:59 IST
Last Updated 30 ನವೆಂಬರ್ 2025, 6:59 IST
<div class="paragraphs"><p> ಬೀದಿನಾಯಿ</p></div>

ಬೀದಿನಾಯಿ

   

ರಾಮನಗರ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ, ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಪ.ಪಂ. ಮುಖ್ಯಾಧಿಕಾರಿಗೆ ತಿಳಿಸಬೇಕು.

ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿ ಅದರ ವಿವರವನ್ನು ಪಟ್ಟಣ ಪಂಚಾಯಿತಿಯ ಆರೋಗ್ಯ ಶಾಖೆಗೆ ನೀಡಬೇಕು.

ADVERTISEMENT

ಕೋರ್ಟ್ ನಿರ್ದೇಶನದಂತೆ, ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ, ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಕಾನೂನು ಕ್ರಮ ವಹಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.