ADVERTISEMENT

ಚನ್ನಪಟ್ಟಣ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 2:08 IST
Last Updated 25 ಜುಲೈ 2025, 2:08 IST
ಚನ್ನಪಟ್ಟಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಂ.ಶಿವಮಾದು, ರಾಂಪುರ ಮಲ್ಲೇಶ್ ಇತರರು ಇದ್ದರು
ಚನ್ನಪಟ್ಟಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಂ.ಶಿವಮಾದು, ರಾಂಪುರ ಮಲ್ಲೇಶ್ ಇತರರು ಇದ್ದರು   

ಚನ್ನಪಟ್ಟಣ: ನಗರದಲ್ಲಿ ಶುಭೋದಯ ಸಾಂಸ್ಕೃತಿಕ ಬಳಗದ ವತಿಯಿಂದ ಸೋಮವಾರ ಪ್ರತಿಭಾ ಪುರಸ್ಕಾರ ಹಾಗೂ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು.

ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಹಾಗೂ ಸೃಜನಾತ್ಮಕತೆ ಬೆಳೆಸಿದರೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವುದರ ಜೊತೆಗೆ ಅವರಿಗೆ ನೀಡುವ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸುತ್ತದೆ ಎಂದರು.

ADVERTISEMENT

ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ರಾಂಪುರ ಮಲ್ಲೇಶ್ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ನಿವೃತ್ತ ಪ್ರಾಂಶುಪಾಲ ಪುಟ್ಟಲಿಂಗಯ್ಯ ಮಾತನಾಡಿ, ಪ್ರತಿಭಾವಂತರು ವ್ಯಾಸಂಗ ಮಾಡಿ ವಿದೇಶಗಳಿಗೆ ಹೋಗುವ ಬದಲು ನಮ್ಮ ದೇಶದಲ್ಲೇ ಉಳಿದರೆ ದೇಶ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಆರ್.ಕೆ.ರಾಮಕೃಷ್ಣೇಗೌಡ, ಸಿದ್ದಪ್ಪ, ಮಹೇಶ್ವರ್, ರಾಂಪುರ ಮಲುವೇಗೌಡ, ಪೂರ್ಣಿಮಾ ಕಾರಂತ್, ಸೋಗಲ ರಾಮು, ಎಚ್.ಕೆ. ರಾಮಚಂದ್ರು, ಬಿ. ಪುಟ್ಟಲಿಂಗಯ್ಯ, ಸಿ.ಎಸ್.ಶ್ರೀಕಂಠಯ್ಯ, ಯೋಗೇಶ್ ಚಕ್ಕೆರೆ, ರಾಮಣ್ಣ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.