ವಿದ್ಯಾರ್ಥಿ ವೇತನ
– ಗೆಟ್ಟಿ ಚಿತ್ರ
ರಾಮನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21, 2021-22, 2022-23, 2023-24, 2024-25 ಹಾಗೂ 2025-26ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿವೇತನ/ ಶುಲ್ಕ ಮರುಪಾವತಿ ಸಾಧ್ಯವಾಗುತ್ತಿಲ್ಲ.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಕೊಳ್ಳದಿರುವುದು, ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು, ಕೌನ್ಸೆಲಿಂಗ್ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೌನ್ಸೆಲಿಂಗ್ ದತ್ತಾಂಶ ನಮೂದಿಸದಿರುವುದು, ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ದತ್ತಾಂಶವನ್ನು ವಿಶ್ವವಿದ್ಯಾಲಯಗಳು ವಿದ್ಯಾರ್ಥಿವೇತನ ತಂತ್ರಾಂಶದೊಂದಿಗೆ ಹಂಚಿಕೊಳ್ಳದಿರುವುದು ಈ ತೊಡಕಿಗೆ ಕಾರಣವಾಗಿದೆ.
ಈ ಎಲ್ಲಾ ಸಮಸ್ಯಗಳನ್ನು ಬಗೆಹರಿಸಿ ಮಾಹಿತಿ ಅಪ್ಡೇಟ್ ಮಾಡಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್, ತಾಲ್ಲೂಕು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಾಗಿನ್‌ನಲ್ಲಿ ಅವಕಾಶ ನೀಡಲಾಗಿರುತ್ತದೆ. ವಿದ್ಯಾರ್ಥಿಗಳು ಜ. 30ರೊಳಗೆ ಮಾಹಿತಿ ಅಪ್ಡೇಟ್ ಮಾಡಬೇಕು. ಇಲ್ಲದಿದ್ದರೆ ಅವರ ಅರ್ಜಿ ತಿರಸ್ಕೃತವಾಗಲಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.