ರಾಮನಗರ: 2024-25ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಮರಿ ಪಾಲನೆ ಕೊಳಗಳ ನಿರ್ಮಾಣ, ಮೀನು ಕೃಷಿ ಕೊಳಗಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚಗಳಿಗೆ ಸಹಾಯಧನ, ಮೀನುಮರಿ ಉತ್ಪಾದನಾ ಕೇಂದ್ರಗಳ ಸ್ಥಾಪನೆಗೆ (ಶುದ್ದ ನೀರಿನ ಮೀನುಮರಿ ಘಟಕ) ಸಹಾಯಧನ ನೀಡಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ 40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ 60ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಆ. 16ರೊಳಗೆ ಕಚೇರಿಯ ವೇಳೆಯಲ್ಲಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ರಾಮನಗರ ತಾಲ್ಲೂಕು ಮೊ: 9880347733 ಮೀನುಗಾರಿಕೆ ಸಹಾಯಕ ನಿರ್ದೇಶಕರು, ಚನ್ನಪಟ್ಟಣ ತಾಲ್ಲೂಕು ಮೊ: 7795621180 ಮತ್ತು ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕನಕಪುರ ತಾಲ್ಲೂಕು ಮೊ: 8618277242 ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಗಡಿ ತಾಲ್ಲೂಕು ಮೊ: 7795621180 ಹಾಗೂ ಮೀನುಗಾರಿಕೆ ಉಪನಿರ್ದೇಶಕರು, ಬೆಂಗಳೂರು ದಕ್ಷಿಣ ಜಿಲ್ಲೆ ಮೊ: 9448655014 ಇವರನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.