ಮಾಗಡಿ: ಪ್ರತಿಯೊಬ್ಬ ಮನುಷ್ಯರ ಜೀವನದಲ್ಲಿ ಮುಂದೆ ಗುರಿ ಮತ್ತು ಹಿಂದೆ ಗುರುವಿನ ಮಾರ್ಗದರ್ಶನ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ ಎಂದು ತುಮಕೂರು ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ಟಿ.ಎಚ್.ರಂಗಯ್ಯ ದಂಪತಿಯನ್ನು ಸನ್ಮಾನಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಮಾರ್ಗದರ್ಶನವನ್ನು ಪಾಲಿಸುವ ಮೂಲಕ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು ಎಂದರು.
ತಾ.ಪಂ.ಮಾಜಿ ಸದಸ್ಯ ಶಂಕಪ್ಪ, ಹಳೆ ವಿದ್ಯಾರ್ಥಿಗಳಾದ ಮಂಜುಳಾಬಾಯಿ, ಸಂತೋಷ್, ಲಕ್ಕೇನಹಳ್ಳಿ ನಾರಾಯಣ, ಮಂಜುನಾಥ್, ಶ್ರೀಧರ್, ಮೋಹನ್, ರಂಗಯ್ಯ, ಕೃಷ್ಣಪ್ಪ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.