
ಚನ್ನಪಟ್ಟಣ: ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಕಬ್ಬು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಬ್ಬು ಹಿಡಿದು ನಗರದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಗಳು, ಸರ್ಕಾರ ಟನ್ ಕಬ್ಬಿಗೆ ₹3,500 ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆಯು ಕಬ್ಬು ಬೆಳೆಗಾರರ ಪ್ರತಿಭಟನೆಗೆ ಬೆಂಬಲ ನೀಡುತ್ತದೆ. ಸರ್ಕಾರ ಕೂಡಲೇ ಕಬ್ಬು ಬೆಳೆಗಾರ ರೈತರ ಹಿತ ಕಾಯುವ ನಿಟ್ಟಿನಲ್ಲಿ ಟನ್‌ಗೆ ₹3,500 ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ವೇದಿಕೆ ರಾಜ್ಯ ಅಧ್ಯಕ್ಷ ರಮೇಶ್ ಗೌಡ ಎಚ್ಚರಿಕೆ ನೀಡಿದರು.
ಗೌರವಾಧ್ಯಕ್ಷ ಬೈರಾಪಟ್ಟಣ ಸತೀಶ್, ಮಂಗಳವಾರಪೇಟೆ ಕೃಷ್ಣಪ್ರಸಾದ್, ಮರಿಅಂಕೇಗೌಡ, ರಾಜು, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ಜಯರಾಮು, ಕುಕ್ಕೂರುದೊಡ್ಡಿ ದುರ್ಗೇಗೌಡ, ಪುನೀತ್, ಚನ್ನಪ್ಪ, ಗಣೇಶ್, ಬೀರೇಶ್, ಆರ್. ಶಂಕರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.