ADVERTISEMENT

ಗೃಹಿಣಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 4:17 IST
Last Updated 25 ಫೆಬ್ರುವರಿ 2021, 4:17 IST

ಚನ್ನಪಟ್ಟಣ: ಪಟ್ಟಣದ ಕೋಟೆಯ ಗೃಹಿಣಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ರಾಮಮ್ಮನ ಕೆರೆ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಉಷಾ (30) ಆತ್ಮಹತ್ಯೆ ಮಾಡಿಕೊಂಡವರು. ಇವರು ಕೋಟೆ ನಿವಾಸಿ ಸೋಮಶೇಖರ್ ಅವರ ಪತ್ನಿ. ಇವರು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿ ಪಡೆದು ಸ್ಥಳಕ್ಕೆ ಬಂದ ಪಟ್ಟಣದ ರೈಲ್ವೆ ಪೊಲೀಸರು ಮೃತದೇಹವನ್ನು ಹೊರತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT