ADVERTISEMENT

ಕನಕಪುರ: ಐ.ಗೊಲ್ಲಹಳ್ಳಿ ಗ್ರಾ.ಪಂ ಅಧ್ಯಕ್ಷೆಯಾಗಿ ಸುಶೀಲಾ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 3:40 IST
Last Updated 16 ಫೆಬ್ರುವರಿ 2021, 3:40 IST
ಐ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸುಶೀಲಾ ಸೋಮರಾಜು ಮತ್ತು ಉಪಾಧ್ಯಕ್ಷ ಶಿವಣ್ಣೇಗೌಡ ಅವರನ್ನು ಸನ್ಮಾನಿಸಲಾಯಿತು
ಐ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸುಶೀಲಾ ಸೋಮರಾಜು ಮತ್ತು ಉಪಾಧ್ಯಕ್ಷ ಶಿವಣ್ಣೇಗೌಡ ಅವರನ್ನು ಸನ್ಮಾನಿಸಲಾಯಿತು   

ಕನಕಪುರ: ತಾಲ್ಲೂಕಿನ ಐನೋರ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಶೀಲಾ ಸೋಮರಾಜು ಮತ್ತು ಉಪಾಧ್ಯಕ್ಷರಾಗಿ ಶಿವಣ್ಣೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಯ್ಯಂಬಳ್ಳಿ ಹೋಬಳಿಯ ಐ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯ ಸ್ಥಾನಗಳಿವೆ. ಇದರಲ್ಲಿ 9 ಮಹಿಳೆಯರು ಮತ್ತು 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ಗೆ ಮೀಸಲಾಗಿತ್ತು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಪದ್ಮನಾಭ ಚುನಾವಣಾಧಿಕಾರಿಯಾಗಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವಣ್ಣಸಿದ್ದಯ್ಯ, ಕಾರ್ಯದರ್ಶಿ ಶಿವಮಾದನಾಯ್ಕ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.