ರಾಮನಗರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯತನ ತೋರಿರುವ ರಾಮನಗರದ ಶಿಕ್ಷಕಿ ಅಮೃತಾ ಭಟ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಉಮೇಶ್ ಅವರನ್ನು ಜಿಲ್ಲಾಧಿಕಾರಿ ಹಾಗೂ ಸಮೀಕ್ಷೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಯಶವಂತ್ ವಿ. ಗುರುಕರ್ ಸೋಮವಾರ ಅಮಾನತು ಮಾಡಿದ್ದಾರೆ.
ಸಮೀಕ್ಷೆಯ ಹೊಣೆ ಹೊತ್ತಿರುವ ಹಿಂದುಳಿದ ವರ್ಗಗಳ ಆಯೋಗ ನೀಡಿದ ನಿರ್ದೇಶನಗಳಂತೆ, ಅಮೃತಾ ಭಟ್ ಮತ್ತು ಉಮೇಶ್ ಅವರು ತರಬೇತಿಗೂ ಹಾಜರಾಗದೆ, ಸಮೀಕ್ಷೆಯಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಮೇಲ್ವಿಚಾರಕರ ಕರೆ ಹಾಗೂ ವಾಟ್ಸ್ಆ್ಯಪ್ ಸಂದೇಶಕ್ಕೂ ಪ್ರತಿಕ್ರಿಯಿಸಿಲ್ಲ.
ಈ ಕುರಿತು, ಕೊಟ್ಟಿರುವ ನೋಟಿಸ್‌ಗೂ ಸ್ಪಂದಿಸಿಲ್ಲ. ಇದರಿಂದಾಗಿ ರಾಮನಗರ ತಾಲ್ಲೂಕಿನಲ್ಲಿ ಸಮೀಕ್ಷೆ ಪ್ರಗತಿ ಕುಂಠಿತವಾಗಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಪ್ರಸ್ತಾವ ಕಳಿಸಿದ್ದರು. ಹಾಗಾಗಿ, ಸಮೀಕ್ಷೆಗೆ ಸಹಕಾರ ನೀಡದ ಅಮೃತಾ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.