ADVERTISEMENT

ಟೇಕ್ವಾಂಡೊ: ಏಕತಾ ಚಿನ್ನ ಸಾಧನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 4:15 IST
Last Updated 3 ಫೆಬ್ರುವರಿ 2026, 4:15 IST
ಎಂ. ಏಕತಾ
ಎಂ. ಏಕತಾ   

ರಾಮನಗರ: ರಾಜಧಾನಿ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 8ನೇ ಆವೃತ್ತಿಯ ಕರ್ನಾಟಕ ಟೇಕ್ವಾಂಡೊ ಕಪ್: 2026 ಪಂದ್ಯಾವಳಿಯ 8 ವರ್ಷದೊಳಗಿನ ಹೆಣ್ಣು ಮಕ್ಕಳ ಪೂಮ್ಸೆ (ಕೌಶಲ ವಿಭಾಗ) ಸಬ್ ಜೂನಿಯರ್ ವಿಭಾಗದಲ್ಲಿ ರಾಮನಗರದ ಎಂ. ಏಕತಾ ಚಿನ್ನದ ಪದಕ ಗೆದ್ದಿದ್ದಾಳೆ.

ಏಕತಾ, ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲಾ ಟೇಕ್ವಾಂಡೊ ಅಸೋಸಿಯೇಷನ್ ಜಿಲ್ಲಾ ಉಪಾಧ್ಯಕ್ಷರೂ ಆಗಿರುವ ಮಾಸ್ಟರ್ ಎಂ. ಸತೀಶ್ ಅವರ ಬಳಿ ಏಕತಾ ತರಬೇತಿ ಪಡೆಯುತ್ತಿದ್ದಾಳೆ.

8 ವರ್ಷದೊಳಗಿನ ಪೂಮ್ಸೆ ಸಬ್ ಜೂನಿಯರ್ ವಿಭಾಗದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 40 ಸ್ಪರ್ಧಿಗಳು ಭಾಗವಹಿಸಿದ್ದರು. ಏಕತಾ ಸಾಧನೆಗೆ ಅಸೋಸಿಯೇಷನ್ ಅಧ್ಯಕ್ಷ ಮಾಸ್ಟರ್ ಕೃಷ್ಣಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿ ಗೋವಿಂದ್ ಎಂ. ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.