ಮೈಸೂರು ಶ್ರೀ ರಾಮಕೃಷ್ಣ ಆಶ್ರಮ ಶಾಲೆಯ ತಂಡ ಹಾಕಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.
ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ದೊಡ್ಡ ಸೋಮನಹಳ್ಳಿ ಗ್ರಾಮದ ಡಾ.ಡಿ.ಸಿ. ರಾಮಚಂದ್ರ ಹಾಗೂ ಎನ್ .ಮಧುಲತಾ ಅವರ ಪುತ್ರ ಆರ್.ಪರ್ಜನ್ಯ ಪ್ರತಿನಿಧಿಸಿದ್ದ ಹಾಕಿ ತಂಡ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತವಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ರಾಮಕೃಷ್ಣ ಆಶ್ರಮ ಮೈಸೂರುನಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್.ಪರ್ಜನ್ಯ ಅವರ ತಂಡ ಕೊಡಗಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.