ADVERTISEMENT

ಗುಡಿ ಸರಗೂರು: ₹2.34 ಲಕ್ಷ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 13:28 IST
Last Updated 14 ಫೆಬ್ರುವರಿ 2020, 13:28 IST
ಚನ್ನಪಟ್ಟಣ ತಾಲ್ಲೂಕಿನ ಗುಡಿಸರಗೂರು ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ವೇಳೆ ಸಂಗ್ರಹವಾದ ಹಣವನ್ನು ಎಣಿಸಲಾಯಿತು
ಚನ್ನಪಟ್ಟಣ ತಾಲ್ಲೂಕಿನ ಗುಡಿಸರಗೂರು ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ವೇಳೆ ಸಂಗ್ರಹವಾದ ಹಣವನ್ನು ಎಣಿಸಲಾಯಿತು   

ಚನ್ನಪಟ್ಟಣ: ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಗುಡಿಸರಗೂರು ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ವೇಳೆ ₹2.34 ಲಕ್ಷ ಹುಂಡಿ ಹಣ ಸಂಗ್ರಹವಾಗಿದೆ.

ತಹಶೀಲ್ದಾರ್ ಸುದರ್ಶನ್ ಅವರ ಮಾರ್ಗದರ್ಶನದಲ್ಲಿ ಸಾರ್ವಜನಿಕರ ಎದುರು ಹುಂಡಿಯನ್ನು ತೆರೆದು ಸಂಗ್ರಹವಾಗಿರುವ ಹಣವನ್ನು ಗುರುವಾರ ಎಣಿಸಲಾಯಿತು. ಎಣಿಸಿದ ಬಳಿಕ ಸರ್ಕಾರದ ಖಜಾನೆಗೆ ನೀಡಲಾಯಿತು.

ವಿರುಪಾಕ್ಷಿಪುರ ಹೋಬಳಿಯ ಕಂದಾಯ ನಿರೀಕ್ಷಕ ರಜತ್, 10ಕ್ಕೂ ಹೆಚ್ಚು ಮಂದಿ ಗ್ರಾಮಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ಹಣ ಎಣಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT