
ಪ್ರಜಾವಾಣಿ ವಾರ್ತೆ
ರಾಮನಗರ: ತಾಲ್ಲೂಕಿನ ರಾಂಪುರದ ಶ್ರೀ ಪಟ್ಟಲದಮ್ಮ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಸುಮಾರು ₹40 ಸಾವಿರ ಕದ್ದೊಯ್ದಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕಳ್ಳರು ಫೆ. 25ರಂದು ರಾತ್ರಿ ಕೃತ್ಯ ಎಸಗಿದ್ದಾರೆ. ಮಾರನೇಯ ದಿನ ಬೆಳಿಗ್ಗೆ ದೇವಾಲಯದ ಪೂಜಾರಿ ಬಂದು ನೋಡಿದಾಗ ಬಾಗಿಲು ತೆರೆದಿತ್ತು. ಒಳ ಹೋಗಿ ನೋಡಿದಾಗ ಹುಂಡಿಯ ಬೀಗ ತೆರೆದು, ಒಳಗಿದ್ದ ನಗದನ್ನು ಕದ್ದಿರುವುದು ಗೊತ್ತಾಯಿತು. ಬಳಿಕ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ಕಳ್ಳರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.