
ಚನ್ನಪಟ್ಟಣ: ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಬಿಸಿಲೇಶ್ವರಿ ದೇವಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಯುಗಾದಿಯಂದು ಪೂಜೆ ಸಲ್ಲಿಸಲು ಬಂದಿದ್ದೇನೆ. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ, ನಾಡಿನ ಜನತೆಗೆ ಸುಖ ಶಾಂತಿ ದೊರೆಯಲಿ ಎಂಬ ಆಶಯದಿಂದ ಪೂಜೆ ಸಲ್ಲಿಸಿದ್ದೇನೆ ಎಂದರು.
ಆದರೆ ನಿಶಾ ಯೋಗೇಶ್ವರ್ ಬೇಟಿ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಜರಿದ್ದುದ್ದು ಗಮನ ಸೆಳೆಯಿತು.
ಕಾಂಗ್ರೆಸ್ ಮುಖಂಡ ಸಿಂಗರಾಜಿಪುರ ರಾಜಣ್ಣ, ಕೋಡಂಬಹಳ್ಳಿ ಸಿದ್ದರಾಮು, ಕೆ.ಎಸ್.ನಾಗರಾಜು, ಹಾರೋಕೊಪ್ಪ ಪ್ರೇಮ್ ಕುಮಾರ್, ಗರಕಹಳ್ಳಿ ಸಿದ್ದಪ್ಪ, ಮಂಗಾಡಹಳ್ಳಿ ನಾಗರಾಜು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.