ADVERTISEMENT

ರಾಮನಗರ: ಪರಿಣಾಮ ಬೀರದ ಬಂದ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 5:06 IST
Last Updated 5 ಡಿಸೆಂಬರ್ 2020, 5:06 IST
ರಾಮನಗರದಲ್ಲಿ ವಾಹನ ಸಂಚಾರ ಎಂದಿನಂತಿದೆ
ರಾಮನಗರದಲ್ಲಿ ವಾಹನ ಸಂಚಾರ ಎಂದಿನಂತಿದೆ   

ರಾಮನಗರ: ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ.

ಶನಿವಾರ ಮುಂಜಾನೆ ನಗರದೊಳಗಿನ ಜನಜೀವನ ಎಂದಿನಂತೆ ಇದೆ. ಕೆಎಸ್ ಆರ್ ಟಿಸಿ ಬಸ್, ಆಟೊಗಳು ಸಂಚರಿಸುತ್ತಿವೆ. ಅಂಗಡಿ ಮುಂಗಟ್ಟು, ಹೋಟೆಲ್ ಗಳು ತೆರೆದಿವೆ. ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿಯಲ್ಲೂ ವಹಿವಾಟು ಎಂದಿನಂತೆ ಇದೆ.

ಐಜೂರು ವೃತ್ತದಲ್ಲಿ ಮುಂಜಾನೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ADVERTISEMENT

ಕರವೇ ಕಾರ್ಯಕರ್ತರು ವಶಕ್ಕೆ: ರಾಮನಗರ ಐಜೂರು ವೃತ್ತದಲ್ಲಿ ರಸ್ತೆ ತಡೆ ನಡೆಸಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.