ADVERTISEMENT

ಮಾಗಡಿ: ಸ್ನಾನ ಮಾಡಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 3:12 IST
Last Updated 15 ಏಪ್ರಿಲ್ 2021, 3:12 IST
ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಕೆರೆಯಲ್ಲಿ ಕಾಲು ಜಾರಿಬಿದ್ದು ಮೃತಪಟ್ಟಿದ್ದ ಸಿದ್ದರಾಜು ಶವ ಹೊರತೆಗೆಯಲು ಶ್ರಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಕೆರೆಯಲ್ಲಿ ಕಾಲು ಜಾರಿಬಿದ್ದು ಮೃತಪಟ್ಟಿದ್ದ ಸಿದ್ದರಾಜು ಶವ ಹೊರತೆಗೆಯಲು ಶ್ರಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ   

ಮಾಗಡಿ: ತಾಲ್ಲೂಕಿನ ಗುಡೇಮಾರನಹಳ್ಳಿ ಕೆರೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಸಿದ್ದರಾಜು (45) ಮೃತಪಟ್ಟವರು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ಎನ್. ಉದಯ್ ಕುಮಾರ್ ನೇತೃತ್ವದ ಸಿಬ್ಬಂದಿಯಾದ ಬಲರಾಮ, ಅಪ್ಪಯ್ಯ, ಶಿವಕುಮಾರ್ ತಂಡ ಎರಡು ಗಂಟೆಗಳ ಕಾಲ ಶ್ರಮಪಟ್ಟು ಶವವನ್ನು ಹೊರ ತೆಗೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT