ಮಾಗಡಿ: ತಾಲ್ಲೂಕಿನ ಕೆಂಪಸಾಗರದಲ್ಲಿ ಜೀರ್ಣೋದ್ಧಾರಗೊಂಡಿರುವ ವಿಶ್ವೇಶ್ವರಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆಯ ಅಂಗವಾಗಿ ಕೆರೆಯಲ್ಲಿ ಗಂಗಾಪೂಜೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆನೀಡಲಾಯಿತು.
ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ, ಎಪಿಎಂಸಿ ನಿರ್ದೇಶಕ ಕೆ.ಟಿ. ಮಂಜುನಾಥ್, ಚಂದ್ರಶೇಖರ್ ಕುಟುಂಬದವರು ಗಂಗಾಪೂಜೆಯ ನಂತರ ಗಂಗಾ ಜಲವನ್ನು ಮಂಗಳವಾದ್ಯಗಳ ಸಹಿತ ಮೆರವಣಿಗೆಯಲ್ಲಿ ದೇವಾಲಯದ ಪೌಳಿಗೆ ತಂದು ಪೂಜೆ ಸಲ್ಲಿಸಿದರು.
ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಂಚುಗಲ್ ಬಂಡೇಮಠಾಧ್ಯಕ್ಷ ಬಸವಲಿಂಗ ಸ್ವಾಮೀಜಿ, ಬೆಟ್ಟಹಳ್ಳಿ ಮಠಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಗ್ರಾಮಸ್ಥರುಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.