ADVERTISEMENT

ಕೇಬಲ್ ಕಳ್ಳತನ: ಕಳ್ಳರನ್ನು ಹಿಡಿದ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2025, 16:41 IST
Last Updated 20 ಮಾರ್ಚ್ 2025, 16:41 IST

ಪ್ರಜಾವಾಣಿ ವಾರ್ತೆ

ಕನಕಪುರ: ಕೊಳವೆಬಾವಿಗಳಿಗೆ ಅಳವಡಿಸಿದ್ದ ಕೇಬಲ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಆಲನತ್ತ ಮತ್ತು ಅರ್ಜನಳ್ಳಿ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ.

ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಆಲನತ್ತ ಮತ್ತು ಅರ್ಜನಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೇಬಲ್ ಕಳ್ಳತನ ಮಾಡಿ ಅದನ್ನು ತಮ್ಮ ವಾಹನದಲ್ಲಿ ತೆಗೆದುಕೊಂಡು ಹೋಗುವಾಗ ಇಬ್ಬರು ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ADVERTISEMENT

ವಿಕಾಸ್‌ ಮತ್ತು ಅಪ್ಪು ನಾಯ್ಕ ಸಿಕ್ಕಿಬಿದ್ದಿರುವ ಕಳ್ಳರು. ಕೋಡಿಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.