ಚನ್ನಪಟ್ಟಣ: ನಗರದ ಜೀವನ್ ಪುರ ಮೊಹಲ್ಲಾದಲ್ಲಿ ಮನೆಯೊಂದರ ಬಾಗಿಲು ಒಡೆದು ಒಡವೆ, ನಗದು ದೋಚಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಇಲ್ಲಿನ ನಿವಾಸಿ ರಸೂಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಬಟ್ಟೆ ವ್ಯಾಪಾರಿಯಾಗಿದ್ದು, ಬಟ್ಟೆ ಖರೀದಿಗೆಂದು ಮುಂಬೈಗೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಅವರು ತಾಯಿಯನ್ನು ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ್ದನ್ನು ಅರಿತ ಕಳ್ಳರು ಮನೆಯ ಬಾಗಿಲು ಒಡೆದು ಸುಮಾರು 15 ಗ್ರಾಂ ಚಿನ್ನದ ಸರ, ₹ 30 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.