ADVERTISEMENT

ಕಳವು: ನಾಲ್ವರು ಆರೋಪಿಗಳ ಸೆರೆ

ಬಂಧಿತರಿಂದ ₹20 ಲಕ್ಷ ಮೌಲ್ಯದ ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 6:12 IST
Last Updated 8 ಫೆಬ್ರುವರಿ 2023, 6:12 IST
ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಚಿನ್ನ ಮತ್ತು ಬೆಳ್ಳಿ ವಸ್ತುಗಳು
ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಚಿನ್ನ ಮತ್ತು ಬೆಳ್ಳಿ ವಸ್ತುಗಳು   

ರಾಮನಗರ: ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ತಂಡವನ್ನು ರಾಮನಗರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿ.ಎನ್. ಮಂಜುನಾಥ (28), ಸುದೀಪ (22) ನಂಜುಂಡ (65) ಹಾಗೂ ಅವರ ಪತ್ನಿ ರಾಜೇಶ್ವರಿ (52) ಬಂಧಿತರು. ಅವರಿಂದ
ಒಟ್ಟು 350 ಗ್ರಾಂ ಬಂಗಾರದ ಒಡವೆ, 1 ಕೆ.ಜಿ ಬೆಳ್ಳಿ, ಒಂದು ಪಲ್ಸರ್ ಬೈಕ್‌ ಹಾಗೂ 1 ಸೋನಿ ಕ್ಯಾಮೆರಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ರಾಮನಗರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿನ ಐದು ಪ್ರಕರಣಗಳು, ಚನ್ನಪಟ್ಟಣ ಗ್ರಾಮೀಣ ಠಾಣೆ ವ್ಯಾಪ್ತಿಯ ಎರಡು, ಕಗ್ಗಲೀಪುರ, ಬ್ಯಾಡರಹಳ್ಳಿ, ಕಿರುಗಾವಲು ಠಾಣೆ ವ್ಯಾಪ್ತಿಯ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 11 ಮನೆಗಳಲ್ಲಿನ ಕಳವು ಹಾಗೂ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿ ಆಗಿರುವುದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಜನವರಿ 20ರಂದು ತಾಲ್ಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್‌ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಕೈಗೊಂಡ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.