ADVERTISEMENT

ರಾಮನಗರ | 31 ಹೊಸ ಕೋವಿಡ್ ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 15:05 IST
Last Updated 23 ಜುಲೈ 2020, 15:05 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ರಾಮನಗರ: ಜಿಲ್ಲೆಯಲ್ಲಿ ಗುರುವಾರ ಹೊಸತಾಗಿ 31 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿತರನ್ನು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈ ಪೈಕಿ ಚನ್ನಪಟ್ಟಣ 10, ಕನಕಪುರ 8, ಮಾಗಡಿ 3 ಹಾಗೂ ರಾಮನಗರ 10 ಪ್ರಕರಣಗಳು ಸೇರಿವೆ. ಇದರಿಂದಾಗಿ ಒಟ್ಟಾರೆ ಸೋಂಕಿತರ ಸಂಖ್ಯೆ 612ಕ್ಕೆ ಏರಿದೆ. ಕನಕಪುರದಲ್ಲಿ 122, ಮಾಗಡಿ 179, ಚನ್ನಪಟ್ಟಣ 140 ಮತ್ತು ರಾಮನಗರದ 171 ಪ್ರಕರಣಗಳು ವರದಿಯಾಗಿವೆ.

ಜಿಲ್ಲೆಯಲ್ಲಿನ ಸೋಂಕಿತರ ಪೈಕಿ 310 ಜನರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನೂ 289 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.