
ಪ್ರಜಾವಾಣಿ ವಾರ್ತೆ
ಕುದೂರು: ಬೆಂಗಳೂರು-ಕುಣಿಗಲ್ ಹೆದ್ದಾರಿಯಲ್ಲಿ ನಕಲಿ ಗನ್ ಪ್ರದರ್ಶಿಸಿದ ಮೂವರನ್ನು ಕುದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಮೂವರು ಯುವಕರು ಬಂಧಿತರು. ಬೆಂಗಳೂರು-ಕುಣಿಗಲ್ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಯುವಕನೊಬ್ಬ ತನ್ನ ಕೈಯಲ್ಲಿ ಗನ್ ಮಾದರಿ ವಸ್ತುವನ್ನು ಹಿಡಿದು ಸಾರ್ವಜನಿಕರಿಗೆ ಪ್ರದರ್ಶಿಸಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಈ ಸಂಬಂಧ ಕುದೂರು ಠಾಣೆ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಬಳಸಿದ್ದ ನಕಲಿ ಗನ್ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.