
ಪ್ರಜಾವಾಣಿ ವಾರ್ತೆ
ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಬೆಂಡಗೋಡು ಗ್ರಾಮದಲ್ಲಿ ಶನಿವಾರ ಮರಳು ಸಾಗಿಸುತ್ತಿದ್ದ (ಎಂ– ಸ್ಯಾಂಡ್) ಟಿಪ್ಪರ್ ಉರುಳಿ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿವೆ.
ಅತಿ ವೇಗವಾಗಿ ಹೊರಟಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ನಾಲ್ಕೈದು ವಿದ್ಯುತ್ ಕಂಬ ತುಂಡಾಗಿ ಮನೆ ಮತ್ತು ರಸ್ತೆಯ ಮೇಲೆ ಬಿದ್ದಿವೆ. ವಿದ್ಯುತ್ ತಂತಿಗಳು ತುಂಡಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಅನಾಹುತ ತಪ್ಪಿದೆ.
ಶನಿವಾರ ಸಂಜೆವರೆಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಬೆಸ್ಕಾಂ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ವಿದ್ಯುತ್ ಕಂಬಗಳನ್ನು ಸರಿಪಡಿಸಿ ವಿದ್ಯುತ್ ಸಂಪರ್ಕ ನೀಡಿದ್ದಾರೆ.