ಚನ್ನಪಟ್ಟಣ: ನಗರದ ರೋಟರಿ ಟಾಯ್ಸ್ ಸಿಟಿ ಸಂಸ್ಥೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದ ನ್ಯಾಯಾಲಯ ಮುಂಭಾಗದಿಂದ ಸಾತನೂರು ಸರ್ಕಲ್‌ವರೆಗೆ ಸಾವಿರ ಮೀಟರ್ ಉದ್ದದ ತ್ರಿವರ್ಣ ಧ್ವಜ ಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ದೇಶಪ್ರೇಮದ ಅರಿವು ಮೂಡಿಸಲಾಯಿತು.
ನಗರದ ನ್ಯಾಯಾಲಯದ ಆವರಣದಿಂದ ಆರಂಭವಾದ ತಿರಂಗಯಾತ್ರೆ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಾಗಿ ಅಂಬೇಡ್ಕರ್ ವೃತ್ತ, ಖಾಸಗಿ ಬಸ್ ನಿಲ್ದಾಣ, ಸಾತನೂರು ವೃತ್ತ, ಡಿ.ಟಿ.ರಾಮು ವೃತ್ತ, ಎಂ.ಜಿ.ರಸ್ತೆ ಮೂಲಕ ಸಾಗಿ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಮುಕ್ತಾಯವಾಯಿತು.
ತಿರಂಗಯಾಥೆಗೆ ಚಾಲನೆ ನೀಡಿದ ಪ್ರಧಾನ ಸಿವಿಲ್ ನ್ಯಾಯಾಧೀಶ ಯೋಗೇಶ್ ಮಾತನಾಡಿ, ದೇಶ ಮತ್ತು ದೇಶಾಭಿಮಾನ ಎದೆಯೊಳಗೆ ಇದ್ದಾಗ ಮಾತ್ರ ಸ್ವಾತಂತ್ರ್ಯ ಎಂಬ ಕಲ್ಪನೆಗೆ ಪರಿಪೂರ್ಣ ಅರ್ಥ ಬರುತ್ತದೆ. ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಪಾಲುಗಾರಿಕೆಯೂ ಮುಖ್ಯಪಾತ್ರ ವಹಿಸುತ್ತದೆ ಎಂದರು.
ನ್ಯಾಯಮೂರ್ತಿ ಸುರೇಶ್, ರೋಟರಿ ಟಾಯ್ಸ್ ಸಿಟಿ ಅಧ್ಯಕ್ಷ ಬಿ.ಎಂ.ನಾಗೇಶ್, ಕಾರ್ಯದರ್ಶಿ ಸಂತೋಷ್ ಪಾಪಣ್ಣ, ಚನ್ನಪಟ್ಟಣ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಬಮುಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಲಯನ್ಸ್ ಸಂಸ್ಥೆ ವೆಂಕಟಸುಬ್ಬಾರೆಡ್ಡಿ, ರೋಟರಿ ಪದಾಧಿಕಾರಿಗಳಾದ ಬೈ ಶ್ರೀನಿವಾಸ್, ಮಾಸ್ತಿಗೌಡ, ರಾಜೇಶ್, ಐಟಿಸಿ ರಘು, ಶೇಖರ್ ಲಾಡ್, ರಾಜೇಶ್ ಅಪ್ಪಗೆರೆ, ಮಹೇಶ್, ಮೋಹನ ಕುಮಾರ್, ಶ್ರೀನಿವಾಸ್, ವಿಜಯ್, ಸುಕೃತ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ರೋಟರಿ ಸಂಸ್ಥೆ ಪದಾಧಿಕಾರಿಗಳು, ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಮತ್ತು ಉಪನ್ಯಾಸಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು. ಯಾತ್ರೆ ವೇಳೆ ಡೊಳ್ಳು ಕುಣಿತ, ದೇಶಭಕ್ತಿ ಗೀತೆಗಳ ಸಂಗೀತ ಗಮನ ಸೆಳೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.