ADVERTISEMENT

ಇಂದು 'ಸ್ಪರ್ಶ ಕುಷ್ಠರೋಗ ಅರಿವು’ ಆಂದೋಲನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 14:21 IST
Last Updated 5 ಫೆಬ್ರುವರಿ 2019, 14:21 IST

ಕನಕಪುರ: ಕುಷ್ಠ ರೋಗಮುಕ್ತ ರಾಜ್ಯವನ್ನು ಮಾಡಲು ಇಲಾಖೆ ವತಿಯಿಂದ ತಾಲ್ಲೂಕು ಮಟ್ಟದ 'ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ'ವು ಫೆ.6 ರಂದು ನಗರದ ಹಳೇ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಮಾನಸಿಕ ಆರೋಗ್ಯ ದಂತ ಆರೈಕೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಅರಿವು ಮೂಡಿಸುವ ಕಾರ್ಯಾಗಾರವು ಅದೇದಿನ ಬೆಳಿಗ್ಗೆ 10.30ಕ್ಕೆ ಹಳೆ ನಗರಸಭೆ ಸಭಾಂಗಣದಲ್ಲಿ ಜರುಗಲಿದೆ.

ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶಾಲಾ ಮಕ್ಕಳು ಮತ್ತು ಆಶಾ ಕಾರ್ಯಕರ್ತೆಯರಿಂದ ಕುಷ್ಠ ರೋಗ ಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.

ADVERTISEMENT

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.