ADVERTISEMENT

ಜಿಲ್ಲಾಧಿಕಾರಿ ಕಚೇರಿಗೆ ಟೊಯೊಟಾ ಕಾರ್ಮಿಕರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 7:20 IST
Last Updated 18 ಡಿಸೆಂಬರ್ 2020, 7:20 IST
ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು
ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರು   

ರಾಮನಗರ: ಟೊಯೊಟಾ‌ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ ಬಿಕ್ಕಟ್ಟು ಪರಿಹರಿಸಲು ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿ ಕಂಪನಿಯ ನೂರಾರು ಕಾರ್ಮಿಕರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಟಿಕೆಎಂ ಕಂಪನಿಯ ಅವ್ಯವಸ್ಥೆಗಳ ವಿರುದ್ಧ ಕಾರ್ಮಿಕರು ಕಳೆದ 40 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಿದ್ದೂ ಸರ್ಕಾರ ಹಾಗೂ ಜಿಲ್ಲಾಡಳಿತ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಕಾರ್ಮಿಕ ಮುಖಂಡರು ದೂರಿದರು. ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.

ಕಾರ್ಮಿಕ ಹೋರಾಟ ಬೆಂಬಲಿಸಿ ರೈತ ಸಂಘ, ಬಹುಜನ ಸಮಾಜ ಪಕ್ಷ, ಸಿಐಟಿಯು ಮೊದಲಾದ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.