ADVERTISEMENT

ಮಾಗಡಿ: ಕೋವಿಡ್‌ ಆಸ್ಪತ್ರೆಗೆ ತಾ.ಪಂ ಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 4:29 IST
Last Updated 23 ಏಪ್ರಿಲ್ 2021, 4:29 IST
ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಐಸೋಲೇಷನ್‌ ಕೇಂದ್ರಕ್ಕೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಟಿ. ಪ್ರದೀಪ್‌ ಭೇಟಿ ನೀಡಿ ಪರಿಶೀಲಿಸಿದರು
ಮಾಗಡಿ ತಾಲ್ಲೂಕಿನ ಹುಲಿಕಟ್ಟೆ ಐಸೋಲೇಷನ್‌ ಕೇಂದ್ರಕ್ಕೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಟಿ. ಪ್ರದೀಪ್‌ ಭೇಟಿ ನೀಡಿ ಪರಿಶೀಲಿಸಿದರು   

ಮಾಗಡಿ: ತಾಲ್ಲೂಕಿನ ಹುಲಿಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್‌ ಆಸ್ಪತ್ರೆ ತೆರೆಯಲಾಗಿದ್ದು, 50 ಮಂದಿ ಸೋಂಕಿತರಿಗೆ ಊಟ, ವಸತಿ ಸವಲತ್ತು ನೀಡಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಟಿ. ಪ್ರದೀಪ್‌ ತಿಳಿಸಿದರು.

ಕೋವಿಡ್ ಐಸೊಲೇಷನ್‌ ಸೆಂಟರ್‌ಗೆ ಗುರುವಾರ ಭೇಟಿ ನೀಡಿ ಸೋಂಕಿತರೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

14 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಹೊರಗಿನಿಂದ ಪಾರ್ಸೆಲ್‌ ಮೂಲಕ ತಂದ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಸಣ್ಣಪುಟ್ಟ ಸಮಸ್ಯೆ ಎದುರಾದರೆ ನಮ್ಮ ಗಮನಕ್ಕೆ ತರಬೇಕು. ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ADVERTISEMENT

ಸಭೆ: ಪಟ್ಟಣದ ಅಂಗಡಿ ಮುಗ್ಗಟ್ಟುಗಳ ವರ್ತಕರ ಸಂಘದ ಸಭೆಯು ಏ. 23ರಂದು ಬೆಳಿಗ್ಗೆ 10.30ಕ್ಕೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ಕೋವಿಡ್‌ ಸೋಂಕು ಹರಡದಂತೆ ನಿಯಂತ್ರಿಸುವಲ್ಲಿ ವರ್ತಕರ ಸಂಘದವರ ಪಾತ್ರ ಅಮೂಲ್ಯವಾಗಿದೆ. ವರ್ತಕರ ಸಂಘದ ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ಪ್ರದೀಪ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.