ADVERTISEMENT

ರಾಮನಗರ| ಸಂಚಾರ ನಿಯಮ ಉಲ್ಲಂಘನೆ ದಂಡ: ಶೇ 50ರಷ್ಟು ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 3:00 IST
Last Updated 23 ನವೆಂಬರ್ 2025, 3:00 IST
ರಾಮನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯ ಮಾತನಾಡಿದರು. ರಾಮನಗರ ಡಿವೈ ಎಸ್‌ಪಿ ಶ್ರೀನಿವಾಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಸವಿತಾ ಹಾಜರಿದ್ದರು
ರಾಮನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯ ಮಾತನಾಡಿದರು. ರಾಮನಗರ ಡಿವೈ ಎಸ್‌ಪಿ ಶ್ರೀನಿವಾಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಸವಿತಾ ಹಾಜರಿದ್ದರು   

ರಾಮನಗರ: ಪೊಲೀಸ್ ಇಲಾಖೆ ಸಂಚಾರ ಇ–ಚಲನ್‌ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳಲ್ಲಿ ಶೇ50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯ ತಿಳಿಸಿದರು.

ನಗರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ರಿಯಾಯಿತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ.21ರಿಂದ ಡಿ.12ರವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಕರಣ ಬಾಕಿ ಉಳಿಸಿಕೊಂಡಿರುವ ವಾಹನಗಳ ಮಾಲೀಕರು, ಸಾರ್ವಜನಿಕರು, ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸೆ.13ರಂದು ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 8241 ಪ್ರಕರಣಗಳಲ್ಲಿ ₹29.60 ಲಕ್ಷ ಮೊತ್ತ ಪಾವತಿಯಾಗಿದೆ. ಮುಂದಿನ ಲೋಕ ಅದಾಲತ್ ಡಿ.13ರಂದು ನಡೆಯಲಿದೆ. ಸಾರಿಗೆ ಇಲಾಖೆ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಹಾಜರಾಗಿ ಕಕ್ಷಿದಾರರು ರಾಜಿ ಸಂಧಾನ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ADVERTISEMENT

ರಾಮನಗರ ಡಿವೈಎಸ್‌ಪಿ ಶ್ರೀನಿವಾಸ್ ಮಾತನಾಡಿ, ಇ–ಚಲನ್‌ಗಳ ಮೊತ್ತ ಪಾವತಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗುವುದು. ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ದಂಡದ ಮೊತ್ತ ಪಾವತಿಸಬಹುದು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.