ADVERTISEMENT

ಮಳೆಯಿಂದಾಗಿ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 1 ಮೇ 2023, 19:53 IST
Last Updated 1 ಮೇ 2023, 19:53 IST
ಸಂಗನಬಸವನದೊಡ್ಡಿ ಅಂಡರ್‌ಪಾಸ್‌ ಬಳಿ ಸೋಮವಾರ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು
ಸಂಗನಬಸವನದೊಡ್ಡಿ ಅಂಡರ್‌ಪಾಸ್‌ ಬಳಿ ಸೋಮವಾರ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು   

ರಾಮನಗರ: ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿದ್ದು, ಇದರಿಂದಾಗಿ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಂಗನಬಸವನ ದೊಡ್ಡಿ ಅಂಡರ್‌ಪಾಸ್‌ ಬಳಿ ಸಂಚಾರ ದಟ್ಟಣೆ ಉಂಟಾಯಿತು.

ಅಂಡರ್‌ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಮತ್ತೆ ಅಲ್ಪ ಪ್ರಮಾಣದಲ್ಲಿ ನೀರು ನಿಂತಿದ್ದು, ನೀರನ್ನು ಹೊರ ಹಾಕುವ ಕಾರ್ಯ ನಡೆದಿತ್ತು. ಇದರಿಂದಾಗಿ ಬೈಕ್‌ಗಳು ಎಕ್ಸ್‌ಪ್ರೆಸ್‌ ವೇನಲ್ಲಿಯೇ ಸಂಚಾರ ಕೈಗೊಂಡವು. ಮಳೆ ಬಂದ ಸಂದರ್ಭ ಮೇಲ್ಸೆತುವೆ ಕೆಳಗೆ 50ಕ್ಕೂ ಹೆಚ್ಚು ಬೈಕ್‌ ಸವಾರರು ಆಶ್ರಯ ಪಡೆದರು. ಇದರಿಂದಾಗಿ ಹೆದ್ದಾರಿಯಲ್ಲಿ ಕಿ.ಮೀ. ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರದಾಡಿದರು.

ರಾಮನಗರ ಸಂಚಾರ ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಮಳೆ ನಿಂತ ಬಳಿಕ ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT