ADVERTISEMENT

ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 3:45 IST
Last Updated 13 ಸೆಪ್ಟೆಂಬರ್ 2021, 3:45 IST

ರಾಮನಗರ: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು.

ಭಾನುವಾರ ನಗರದಲ್ಲಿ ನೀಟ್ ಪರೀಕ್ಷೆ ಬರೆಯಲು ಜಿಲ್ಲೆ ಜೊತೆಗೆ ಹೊರಜಿಲ್ಲೆಗಳ ವಿದ್ಯಾರ್ಥಿಗಳೂ ಧಾವಿಸಿದ್ದರು. ಪರೀಕ್ಷಾ ಕೇಂದ್ರವಾದ ಶಾಂತಿನಿಕೇತನ ವಿದ್ಯಾಸಂಸ್ಥೆ ಆವರಣದ ಬಳಿ ಹಾಗೂ ಹೆದ್ದಾರಿಯ ಎರಡು ಬದಿಯಲ್ಲಿ ತಮ್ಮ ಕಾರುಗಳನ್ನು ನಿಲುಗಡೆ ಮಾಡಿ ಪರೀಕ್ಷೆ ಬರೆಯಲು ತೆರಳಿದ್ದರು. ನಂತರ ಪರೀಕ್ಷೆ ಮುಗಿಸಿ ಏಕಾಏಕಿ ವಾಹನ ತೆಗೆಯಲು ಮುಂದಾದರು. ಇದರಿಂದಾಗಿ ಹೆದ್ದಾರಿಯಲ್ಲಿ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ನಗರದ ಎಸ್ಪಿ ಕಚೇರಿ ಮುಂಭಾಗದಿಂದ ಹಿಡಿದು ತರಕಾರಿ ಮಾರುಕಟ್ಟೆ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕಳೆದ ಮೂರು ದಿನಗಳಿಂದ ಸರ್ಕಾರಿ ರಜೆ ಇದ್ದ ಬೆಂಗಳೂರಿನ ಜನರು ಮಂಡ್ಯ ಹಾಗೂ ಮೈಸೂರು ಮೊದಲಾದ ಕಡೆಗಳಿಗೆ ತೆರಳಿದ್ದು, ಮಧ್ಯಾಹ್ನದ ನಂತರ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿತ್ತು. ಒಂದೇ ಸಮಯದಲ್ಲಿ ವಾಹನಗಳು ರಸ್ತೆಗೆ ಇಳಿದ ಕಾರಣ ಸಂಚಾರ ದಟ್ಟಣೆ ಹೆಚ್ಚಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.