ADVERTISEMENT

ಪೊಲೀಸರ ಪಥಸಂಚಲನ: ಮಹಿಳೆಯರ ಪುಷ್ಪವೃಷ್ಟಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 15:03 IST
Last Updated 21 ಏಪ್ರಿಲ್ 2020, 15:03 IST
ಚನ್ನಪಟ್ಟಣದಲ್ಲಿ ಕೊರೊನಾ ಲಾಕ್ ಡೌನ್ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ಪಥಸಂಚಲನ ನಡೆಸಿದರು
ಚನ್ನಪಟ್ಟಣದಲ್ಲಿ ಕೊರೊನಾ ಲಾಕ್ ಡೌನ್ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ಪಥಸಂಚಲನ ನಡೆಸಿದರು   

ಚನ್ನಪಟ್ಟಣ: ತಾಲ್ಲೂಕಿನಲ್ಲಿ ಕೊರೊನಾ ವೈರಸ್ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿವೈಎಸ್ಪಿ ಓಂ ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಟ್ಟಣದ ವಿವಿಧ ರಸ್ತೆಗಳಲ್ಲಿ ಮಂಗಳವಾರ ಪಥಸಂಚಲನ ನಡೆಸಿದರು.

ಸರ್ಕಲ್ ಇನ್‌ಸ್ಪೆಕ್ಟರ್ ಗೋವಿಂದರಾಜು, ವಸಂತ್, ಸಬ್ ಇ‌ನ್‌ ಸ್ಪೆಕ್ಟರ್ ಶಿವಕುಮಾರ್, ಪ್ರಕಾಶ್, ರವೀಂದ್ರ, ಕುಮಾರಸ್ವಾಮಿ ಹಾಗೂ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

ಪಟ್ಟಣದ ಚರ್ಚ್ ರಸ್ತೆ, ಎಂ.ಜಿ.ರಸ್ತೆ, ಜೆ.ಸಿ.ರಸ್ತೆ, ಡ್ಯೂಂಲೈಟ್ ಸರ್ಕಲ್, ಶೇರು ಹೋಟೆಲ್ ರಸ್ತೆ, ಸಾತನೂರು ಸರ್ಕಲ್ ರಸ್ತೆ, ಕೆಂಪೇಗೌಡ ಬಡಾವಣೆ, ಮಂಜುನಾಥ ಬಡಾವಣೆ, ಕೋಟೆ ರಸ್ತೆಗಳಲ್ಲಿ ಪಥ ಸಂಚಲನ ನಡೆಯಿತು.

ADVERTISEMENT

ಪೊಲೀಸರ ಪಥ ಸಂಚಲನದ ಸಮಯದಲ್ಲಿಪುಷ್ಪವೃಷ್ಟಿ ಮೂಲಕ ಅಭಿನಂದಿಸಲಾಯಿತು. ಮಹಡಿ ಮೇಲೆ ನಿಂತ ಮಹಿಳೆಯರು, ಮಕ್ಕಳು, ವೃದ್ಧರು ಪುಷ್ಪ ಹಾಕಿ ಕೃತಜ್ಞತೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.