ADVERTISEMENT

ಮೈಸೂರು-ಉದಯಪುರ ರೈಲಿನ ಎಂಜಿನ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 7:31 IST
Last Updated 3 ಜುಲೈ 2025, 7:31 IST
   

ಚನ್ನಪಟ್ಟಣ (ರಾಮನಗರ): ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ: 19668) ರೈಲಿನ ಎಂಜಿನ್ ನಲ್ಲಿ ಗುರುವಾರ ಬೆಂಕಿ‌ ಕಾಣಿಸಿಕೊಂಡೊದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮೈಸೂರಿನಿಂದ‌ ಹೊರಟಿದ್ದ ರೈಲು ಬೆಳಿಗ್ಗೆ 11.45ರ ಸುಮಾರಿಗೆ ಚನ್ನಪಟ್ಟಣ ನಿಲ್ದಾಣ ದಾಟಿ ವಂದಾರಗುಪ್ಪೆ ಬಳಿ ಸಾಗುವಾಗ ಇದ್ದಕ್ಕಿದ್ದಂತೆ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಗಮನಿಸಿದ ಲೋಕೊಪೈಲಟ್ ಕೂಡಲೇ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ರೈಲು ನಿಲ್ಲಿಸಿದರು.

ಸ್ಥಳಕ್ಕೆ ಬಂದ ಚನ್ನಪಟ್ಟಣದ ಅಗ್ನಿಶಾಮಕ ದಳದ ಸಿಬ್ಬಂದಿ ರೈಲ್ವೆ ನೌಕರರ ಸಹಕಾರದೊಂದಿಗೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಬಳಿಕ ಸ್ಥಳಕ್ಕೆ ಬೇರೆ ಎಂಜಿನ್ ತಂದು ಅಳವಡಿಸಿದಾಗ ರೈಲು ಹೊರಟಿತು. ಘಟನೆಯಿಂದಾಗಿ‌ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.