
ಪ್ರಜಾವಾಣಿ ವಾರ್ತೆ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ನೋಂದಾಯಿತರಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ, ಉಚಿತ ಮೆಕಾನಿಕಲ್ ಎಲೆಕ್ಟ್ರಿಕಲ್ ವೆಹಿಕಲ್ ತರಬೇತಿಯನ್ನು ಕನಕಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) ಆಯೋಜಿಸಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೌಶಲ್ಯ ತರಬೇತಿ ಪಡೆದುಕೊಂಡು ಉದ್ಯೋಗವಕಾಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9845061822 ಸಂಪರ್ಕಿಸಬೇಕು ಎಂದು ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.