ಮಾಗಡಿ: ತಾಲ್ಲೂಕಿನ ವೀರೇಗೌಡನ ದೊಡ್ಡಿ ಗ್ರಾಮದಿಂದ ಮಂಚನಬೆಲೆಗೆ ತೆರಳುವ ಮುಖ್ಯ ರಸ್ತೆಯ ಕುಂತಿಕಲ್ಲು ಶನಿಮಹಾತ್ಮ ದೇವಸ್ಥಾನದ ಬಳಿ ಮಂಗಳವಾರ ಸಂಜೆ ದೊಡ್ಡ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿರುವುದರಿಂದ ಸಂಚಾರ ವ್ಯವಸ್ಥೆ ಅಡಚಣೆಯಾಗಿದೆ.
ಸಾವನದುರ್ಗ ದಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಮುಖ್ಯರಸ್ತೆಯಲ್ಲಿ ಕಳೆದ ಒಂದು ವಾರಗಳಿಂದ ನಿರಂತರವಾಗಿ ಭಾರಿ ಪ್ರಮಾಣದಲ್ಲಿ ಮಳೆ ಬರುತ್ತಿರುವ ಕಾರಣ ದೊಡ್ಡ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ತಿಳಿಸಿದ್ದು, ಮರ ತೆರವು ಮಾಡಿದ ನಂತರ ಸಂಚಾರ ಮುಕ್ತವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.