ರಾಮನಗರ: ಇಲ್ಲಿನ ಕುಂಭಾಪುರ ಗೇಟ್ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು.
ಸುಂದರೇಶ (49) ಹಾಗೂ ತನ್ಮಯ್ (9) ಮೃತರು. ಶೀಲಾ, ಗಾನವಿ, ಸಾನ್ವಿ ಎಂಬುವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುಟುಂಬವು ಸೋಮವಾರ ಬೆಳಿಗ್ಗೆ ಮಾರುತಿ ಓಮ್ನಿ ಕಾರಿನಲ್ಲಿ ಮದ್ದೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆಯಿತು.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಸಮಯ ವಾಹನಗಳ ಸಂಚಾರ ಅಸ್ತವ್ಯಸ್ತ ಆಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.