ADVERTISEMENT

ರಾಮನಗರ: ಈಜಲು ಕೆರೆಗೆ ಇಳಿದಿದ್ದ ಇಬ್ಬರ ಬಾಲಕರ ಸಾವು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 4:22 IST
Last Updated 22 ಅಕ್ಟೋಬರ್ 2021, 4:22 IST
   

ರಾಮನಗರ: ಬಿಡದಿಯ ಕೆಂಚನಕುಪ್ಪೆ ಬಳಿಯ ಕುಂಬಾರಕಟ್ಟೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಶಾಲಾ ಬಾಲಕರು ಸಾವನ್ನಪ್ಪಿದ್ದಾರೆ.

ಬಿಡದಿಯ ಸರ್ಕಾರಿ ಶಾಲೆಯ 5 ನೇ ತರಗತಿ ವಿದ್ಯಾರ್ಥಿಗಳಾದ ಕೌಶಿಕ್(12) ಮತ್ತು ಕರ್ಣ(11) ಮೃತ ಬಾಲಕರು.

ಇತ್ತೀಚಿಗೆ ಸುರಿದ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಗುರುವಾರ ಮಧ್ಯಾಹ್ನ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು. ಸಂಜೆ ವೇಳೆಗೆ ಮತ್ತೆ ವಾಪಸ್ ಬಂದ ಬಾಲಕರು ಕಟ್ಟೆಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು.

ADVERTISEMENT

ಶುಕ್ರವಾರ ಮುಂಜಾನೆ ನುರಿತ ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರ ತೆಗೆಯಲಾಯಿತು. ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.