
ಪ್ರಜಾವಾಣಿ ವಾರ್ತೆ
ಮಾಗಡಿ: ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ.
ತಾಲ್ಲೂಕಿನ ಚಂದೂರಾಯನಹಳ್ಳಿ ಬಳಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಇರುವ ಕೃಷಿ ಹೊಂಡದಲ್ಲಿ ಈ ಘಟನೆ ನಡೆದಿದೆ.
ತಾಲ್ಲೂಕಿನ ಸಿದ್ದರಂಗಯ್ಯನಪಾಳ್ಯದ ನಿವಾಸಿಗಳಾದ ಶಂಕರ್ (32), ಮೋಹಿತ್ (17) ಮೃತರು. ಕೃಷಿಹೊಂಡದ ಕೆಸರಿನಲ್ಲಿ ಸಿಕ್ಕಿಹಾಕಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.