ADVERTISEMENT

ಡಿ. 26ರಂದು ರೈಲ್ವೆ ಸಚಿವ ಸೋಮಣ್ಣ ರಾಮನಗರ ಜಿಲ್ಲಾ ಪ್ರವಾಸ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 6:04 IST
Last Updated 25 ಡಿಸೆಂಬರ್ 2025, 6:04 IST
ವಿ. ಸೋಮಣ್ಣ
ವಿ. ಸೋಮಣ್ಣ   

ರಾಮನಗರ: ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಡಿ. 26ರಂದು ಶುಕ್ರವಾರ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 7.45ಕ್ಕೆ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಿಂದ ನಿರ್ಗಮಿಸಿ ಬೆಳಿಗ್ಗೆ 8.30ಕ್ಕೆ ಬಿಡದಿ ರೈಲು ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 8.30ರಿಂದ 9 ಗಂಟೆಯವರೆಗೆ ಬಿಡದಿಯ ರೈಲು ನಿಲ್ದಾಣದಲ್ಲಿ ಪರಿವೀಕ್ಷಣೆ ನಡೆಸುವರು. 9.20ಕ್ಕೆ ಟೊಯೋಟಾ ಘಟಕಕ್ಕೆ ಭೇಟಿ ನೀಡುವರು.

ಬೆಳಿಗ್ಗೆ 11.20ಕ್ಕೆ ಬಿಡದಿ ರೈಲು ನಿಲ್ದಾಣಕ್ಕೆ ಬಂದ ನಂತರ, ಅಲ್ಲಿಂದ ರೈಲಿನಲ್ಲಿ ಹೊರಟು ಬೆಳಿಗ್ಗೆ 11.45ಕ್ಕೆ ರಾಮನಗರ ರೈಲು ನಿಲ್ದಾಣಕ್ಕೆ ಬಂದು, ಮಧ್ಯಾಹ್ನ 12.15ರವರೆಗೆ ರಾಮನಗರದ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಮೃತ್ ಭಾರತ್ ನಿಲ್ದಾಣ ಕಾಮಗಾರಿಗಳ ಪರಿಶೀಲನೆ ನಡೆಸುವರು. ಮಧ್ಯಾಹ್ನ 12.15ಕ್ಕೆ ರಾಮನಗರದಿಂದ ನಿರ್ಗಮಿಸಿ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ತೆರಳುವರು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.